ದಿನಾಂಕ : 29/03/2020 ರ ಅಪರಾಧ ಪ್ರಕರಣಗಳು

1. ಚಿಂತಾಮಣಿ ಗ್ರಾಮಾಂತರ ಪೊಲೀಸ್ ಠಾಣೆ ಮೊ.ಸಂ. 152/2020 ಕಲಂ.15(ಎ) ಕೆ.ಇ ಆಕ್ಟ್:-
ದಿನಾಂಕ: 28/03/2020 ರಂದು ಸಂಜೆ 7.30 ಗಂಟೆಗೆ ಚಿಂತಾಮಣಿ ಗ್ರಾಮಾಂತರ ಪೊಲೀಸ್ ಠಾಣೆಯ ಪಿ.ಎಸ್.ಐ ಎಸ್.ನರೇಶ್ ನಾಯ್ಕ್.ಎಸ್ ರವರು ಮಾಲು ಮತ್ತು ಪಂಚನಾಮೆಯೊಂದಿಗೆ ಠಾಣೆಗೆ ಹಾಜರಾಗಿ ನೀಡಿದ ವರದಿಯ ಸಾರಾಂಶವೇನೆಂದರೆ, ಈ ದಿನ ದಿನಾಂಕ 28/03/2020 ರಂದು ತಾನು ಮತ್ತು ಠಾಣಾ ಸಿಬ್ಬಂದಿಯಾದ ಸಿ.ಹೆಚ್.ಸಿ-41 ಜಗದೀಶ ಮತ್ತು ಸಿ.ಪಿ.ಸಿ.513 ಜಗದೀಶ ರವರೊಂದಿಗೆ ಠಾಣಾ ಸರಹದ್ದಿನಲ್ಲಿ ಗಸ್ತು ಮಾಡಿಕೊಂಡು ಸಂಜೆ 6.00 ಗಂಟೆಗೆ ಸೀಕಲ್ಲು ಗ್ರಾಮಕ್ಕೆ ಹೋದಾಗ, ಸದರಿ ಗ್ರಾಮದ ವಾಸಿಯಾದ ರಾಮಚಂದ್ರಪ್ಪ ಬಿನ್ ದೊಡ್ಡ ಮುನಿಯಪ್ಪ ರವರು ತನ್ನ ಚಿಲ್ಲರೆ ಅಂಗಡಿಯ ಮುಂಭಾಗದ ಸಾರ್ವಜನಿಕ ಸ್ಥಳದಲ್ಲಿ ಸಾರ್ವಜನಿಕರಿಗೆ ಮದ್ಯಪಾನ ಮಾಡಲು ಸ್ಥಳಾವಕಾಶ ಮಾಡಿಕೊಟ್ಟಿರುವುದಾಗಿ ಖಚಿತ ಮಾಹಿತಿ ದೊರೆತಿದ್ದು, ಸದರಿ ಸ್ಥಳದ ಮೇಲೆ ದಾಳಿ ಮಾಡಲು ಸೀಕಲ್ಲು ಗ್ರಾಮದಲ್ಲಿದ್ದ ಪಂಚರನ್ನು ಬರಮಾಡಿಕೊಂಡು ಅವರಿಗೆ ವಿಚಾರವನ್ನು ತಿಳಿಸಿ ಅವರೊಂದಿಗೆ ಜೀಪ್ ನಲ್ಲಿ ರಾಮಚಂದ್ರಪ್ಪ ಬಿನ್ ದೊಡ್ಡ ಮುನಿಯಪ್ಪ ರವರ ಚಿಲ್ಲರೆ ಅಂಗಡಿಯ ಬಳಿ ಹೋಗಿ ಜೀಪನ್ನು ನಿಲ್ಲಿಸುವಷ್ಟರಲ್ಲಿ ಮದ್ಯಪಾನ ಮಾಡುತ್ತಿದ್ದವರು ಹಾಗೂ ಮದ್ಯಪಾನ ಮಾಡಲು ಅವಕಾಶ ಮಾಡಿಕೊಟ್ಟಿದ್ದ ಒಬ್ಬ ವ್ಯಕ್ತಿ ಸ್ಥಳದಿಂದ ಓಡಿಹೋಗಿದ್ದು, ಸ್ಥಳದಲ್ಲಿ ನೋಡಲಾಗಿ 90 ಎಂ.ಎಲ್ ನ ಹೇವಾರ್ಡ್ಸ್ ಚೀರ್ಸ್ ವಿಸ್ಕಿ ಕಂಪನಿಯ 2 ಟೆಟ್ರಾ ಪಾಕೆಟ್ ಗಳು, ಎರಡು ಪ್ಲಾಸ್ಟಿಕ್ ಗ್ಲಾಸ್ ಗಳು ಮತ್ತು ಒಂದು ಲೀಟರ್ ನ ಎರಡು ನೀರಿನ ಬಾಟಲಿಗಳಿದ್ದು, ಅವುಗಳನ್ನು ಪರಿಶೀಲಿಸಲಾಗಿ, ಮದ್ಯದ ಟೆಟ್ರಾ ಪಾಕೆಟ್ ಗಳಲ್ಲಿ ಸ್ವಲ್ವ ಮದ್ಯವಿದ್ದು, ಪ್ಲಾಸ್ಟಿಕ್ ಗ್ಲಾಸ್ ಗಳಲ್ಲಿ ಸ್ವಲ್ವ ನೀರು ಮಿಶ್ರಿತ ಮದ್ಯವಿರುತ್ತೆ. ನೀರಿನ ಬಾಟಲಿಗಳನ್ನು ಪರಿಶೀಲಿಸಲಾಗಿ, ಸದರಿ ಬಾಟಲಿಗಳಲ್ಲಿ ಸುಮಾರು 1/4 ರಷ್ಟು ನೀರು ಇರುತ್ತೆ. ಅಲ್ಲಿದ್ದ ಬಾತ್ಮಿದಾರರನ್ನು ಮದ್ಯಪಾನ ಮಾಡಲು ಸ್ಥಳಾವಕಾಶ ಮಾಡಿಕೊಟ್ಟಿರುವ ವ್ಯಕ್ತಿಯ ಹೆಸರು ಮತ್ತು ವಿಳಾಸ ಕೇಳಲಾಗಿ ರಾಮಚಂದ್ರಪ್ಪ ಬಿನ್ ದೊಡ್ಡ ಮುನಿಯಪ್ಪ, 45 ವರ್ಷ, ಪರಿಶಿಷ್ಟ ಜಾತಿ, ಚಿಲ್ಲರೆ ಅಂಗಡಿ ವ್ಯಾಪಾರ, ಸೀಕಲ್ಲು ಗ್ರಾಮ, ಚಿಂತಾಮಣಿ ತಾಲ್ಲೂಕು ಎಂದು ತಿಳಿಸಿರುತ್ತಾರೆ. ನಂತರ ಸ್ಥಳದಲ್ಲಿ ಪಂಚರ ಸಮಕ್ಷಮ ಸಂಜೆ 6.15 ಗಂಟೆಯಿಂದ 7.00 ಗಂಟೆಯವರೆಗೆ ಮಹಜರ್ ಕ್ರಮ ಕೈಗೊಂಡು ಮೇಲ್ಕಂಡ ವಸ್ತುಗಳನ್ನು ಅಮಾನತ್ತು ಪಡಿಸಿಕೊಂಡು ಮಾಲು, ಪಂಚನಾಮೆಯೊಂದಿಗೆ ಠಾಣೆಗೆ ವಾಪಸ್ಸಾಗಿ ಅಕ್ರಮವಾಗಿ ಸಾರ್ವಜನಿಕರಿಗೆ ಮದ್ಯಪಾನ ಮಾಡಲು ತನ್ನ ಚಿಲ್ಲರೆ ಅಂಗಡಿಯ ಮುಂಭಾಗದಲ್ಲಿ ಸ್ಥಳಾವಕಾಶ ಮಾಡಿಕೊಟ್ಟಿರುವ ಆರೋಪಿ ರಾಮಚಂದ್ರಪ್ಪ ಬಿನ್ ದೊಡ್ಡ ಮುನಿಯಪ್ಪ ರವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಲು ಸೂಚಿಸಿರುವುದಾಗಿರುತ್ತೆ.
2. ಚಿಂತಾಮಣಿ ಗ್ರಾಮಾಂತರ ಪೊಲೀಸ್ ಠಾಣೆ ಮೊ.ಸಂ. 153/2020 ಕಲಂ.15(ಎ) ಕೆ.ಇ ಆಕ್ಟ್:-
ದಿನಾಂಕ 29-03-2020 ರಂದು ಮದ್ಯಾಹ್ನ 2-05 ಗಂಟೆಗೆ ಚಿಂತಾಮಣಿ ಗ್ರಾಮಾಂತರ ಪೊಲೀಸ್ ಠಾಣೆಯ ಹೆಚ್.ಸಿ.249 ಎಂ.ಕೆ.ಸಂದೀಪ್ ಕುಮಾರ್ ರವರು ಆರೋಪಿ, ಮಾಲು ಮತ್ತು ಪಂಚನಾಮೆಯೊಂದಿಗೆ ಠಾಣೆಗೆ ಹಾಜರಾಗಿ ನೀಡಿದ ದೂರಿನ ಸಾರಾಂಶವೇನೆಂದರೆ ಈ ದಿನ ದಿನಾಂಕ 29/03/2020 ರಂದು ಪಿ.ಎಸ್.ಐ ರವರು ತನಗೆ ಕರೋನ ವೈರಸ್ ಪ್ರಯುಕ್ತ ಠಾಣಾ ಸರಹದ್ದಿನಲ್ಲಿ ಗಸ್ತಿಗಾಗಿ ನೇಮಕ ಮಾಡಿದ್ದು, ಅದರಂತೆ ತಾನು ಮದ್ಯಾಹ್ನ 12,45 ಗಂಟೆಗೆ ದನಮಿಟ್ಟೇನಹಳ್ಳಿ ಗ್ರಾಮಕ್ಕೆ ಹೋದಾಗ, ಸದರಿ ಗ್ರಾಮದ ವಾಸಿಯಾದ ಚನ್ನಕೃಷ್ಣಪ್ಪ ಬಿನ್ ಸೀತಪ್ಪ ರವರು ತನ್ನ ಚಿಲ್ಲರೆ ಅಂಗಡಿಯ ಮುಂಭಾಗದ ಸಾರ್ವಜನಿಕ ಸ್ಥಳದಲ್ಲಿ ಸಾರ್ವಜನಿಕರಿಗೆ ಮದ್ಯಪಾನ ಮಾಡಲು ಸ್ಥಳಾವಕಾಶ ಮಾಡಿಕೊಟ್ಟಿರುವುದಾಗಿ ಖಚಿತ ಮಾಹಿತಿ ದೊರೆತಿದ್ದು, ಸದರಿ ಸ್ಥಳದ ಮೇಲೆ ದಾಳಿ ಮಾಡಲು ದನಮಿಟ್ಟೇನಹಳ್ಳಿ ಗ್ರಾಮದಲ್ಲಿದ್ದ ಪಂಚರನ್ನು ಬರಮಾಡಿಕೊಂಡು ಅವರಿಗೆ ವಿಚಾರವನ್ನು ತಿಳಿಸಿ ಅವರೊಂದಿಗೆ ಚನ್ನಕೃಷ್ಣಪ್ಪ ಬಿನ್ ಸೀತಪ್ಪ ರವರ ಚಿಲ್ಲರೆ ಅಂಗಡಿಯ ಬಳಿ ಹೋಗಿ ಹೋಗುವಷ್ಟರಲ್ಲಿ ಸಮವಸ್ತ್ರದಲ್ಲಿದ್ದ ತನ್ನನ್ನು ನೋಡಿ ಮದ್ಯಪಾನ ಮಾಡುತ್ತಿದ್ದವರು ಓಡಿ ಹೋಗಿದ್ದು, ಸ್ಥಳದಲ್ಲಿ ನೋಡಲಾಗಿ 180 ಎಂ.ಎಲ್ ನ SOVEREIGN BRANDY ಕಂಪನಿಯ 2 ಟೆಟ್ರಾ ಪಾಕೆಟ್ ಗಳು, ಎರಡು ಪ್ಲಾಸ್ಟಿಕ್ ಗ್ಲಾಸ್ ಗಳು ಮತ್ತು ಒಂದು ಲೀಟರ್ ನ ಎರಡು ನೀರಿನ ಬಾಟಲಿಗಳಿದ್ದು, ಅವುಗಳನ್ನು ಪರಿಶೀಲಿಸಲಾಗಿ, ಮದ್ಯದ ಟೆಟ್ರಾ ಪಾಕೆಟ್ ಗಳಲ್ಲಿ ಸ್ವಲ್ವ ಮದ್ಯವಿದ್ದು, ಪ್ಲಾಸ್ಟಿಕ್ ಗ್ಲಾಸ್ ಗಳಲ್ಲಿ ಸ್ವಲ್ವ ನೀರು ಮಿಶ್ರಿತ ಮದ್ಯವಿರುತ್ತೆ. ನೀರಿನ ಬಾಟಲಿಗಳನ್ನು ಪರಿಶೀಲಿಸಲಾಗಿ, ಸದರಿ ಬಾಟಲಿಗಳಲ್ಲಿ ಸುಮಾರು 1/4 ರಷ್ಟು ನೀರು ಇರುತ್ತೆ. ಅಂಗಡಿಯಲ್ಲಿ ಒಬ್ಬ ವ್ಯಕ್ತಿ ಕುಳಿತು ವ್ಯಾಪಾರ ಮಾಡುತ್ತಿದ್ದು, ಆತನ ಹೆಸರು ಮತ್ತು ವಿಳಾಸ ವಿಚಾರ ಮಾಡಲಾಗಿ, ಚನ್ನಕೃಷ್ಣಪ್ಪ ಬಿನ್ ಸೀತಪ್ಪ, 37 ವರ್ಷ, ವಕ್ಕಲಿಗರು, ಚಿಲ್ಲರೆ ಅಂಗಡಿ ವ್ಯಾಪಾರ, ದನಮಿಟ್ಟೇನಹಳ್ಳಿ ಗ್ರಾಮ, ಚಿಂತಾಮಣಿ ತಾಲ್ಲೂಕು ಎಂದು ತಿಳಿಸಿರುತ್ತಾನೆ. ಅಂಗಡಿಯಲ್ಲಿ ಪರಿಶೀಲಿಸಲಾಗಿ, 180 ಎಂ.ಎಲ್ ನ SOVEREIGN BRANDY ಕಂಪನಿಯ 2 ಮದ್ಯದ ಟೆಟ್ರಾ ಪಾಕೆಟ್ ಗಳು, 180 ಎಂ.ಎಲ್ ನ SILVER CUP INDIAN BRANDY ಕಂಪನಿಯ 2 ಟೆಟ್ರಾ ಪಾಕೆಟ್ ಗಳು ಮತ್ತು 180 ಎಂ.ಎಲ್ ನ BANGALORE GIN ಕಂಪನಿಯ ಎರಡು ಟೆಟ್ರಾ ಪಾಕೆಟ್ ಗಳು ಇರುತ್ತೆ. ಸದರಿ ಮದ್ಯವು 1.080 ಮಿಲಿ ಇದ್ದು ಇದರ ಬೆಲೆ ಸುಮಾರು 566/- ರೂಗಳಾಗಿರುತ್ತೆ. ನಂತರ ಸ್ಥಳದಲ್ಲಿ ಪಂಚರ ಸಮಕ್ಷಮ ಮದ್ಯಾಹ್ನ 1.00 ಗಂಟೆಯಿಂದ 1.45 ಗಂಟೆಯವರೆಗೆ ಮಹಜರ್ ಕ್ರಮ ಕೈಗೊಂಡು ಮೇಲ್ಕಂಡ ಎಲ್ಲಾ ವಸ್ತುಗಳನ್ನು ಅಮಾನತ್ತುಪಡಿಸಿಕೊಂಡು ಆರೋಪಿಯೊಂದಿಗೆ ಠಾಣೆಗೆ ವಾಪಸ್ಸಾಗಿದ್ದು ಮಾಲು ಮತ್ತು ಪಂಚನಾಮೆಯನ್ನು ಹಾಜರುಪಡಿಸುತ್ತಿದ್ದು ಅಕ್ರಮವಾಗಿ ಸಾರ್ವಜನಿಕರಿಗೆ ಮದ್ಯಪಾನ ಮಾಡಲು ತನ್ನ ಚಿಲ್ಲರೆ ಅಂಗಡಿಯ ಮುಂಭಾಗದಲ್ಲಿ ಸ್ಥಳಾವಕಾಶ ಮಾಡಿಕೊಟ್ಟಿರುವ ಆರೋಪಿ ಚನ್ನಕೃಷ್ಣಪ್ಪ ಬಿನ್ ಸೀತಪ್ಪ ರವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಲು ಕೋರಿರುತ್ತೆ.
3. ಕೆಂಚಾರ್ಲಹಳ್ಳಿ ಪೊಲೀಸ್ ಠಾಣೆ ಮೊ.ಸಂ. 34/2020 ಕಲಂ.427-435-447 ಐ.ಪಿ.ಸಿ:-
ದಿನಾಂಕ 28/03/2020 ರಂದು ಸಂಜೆ 18-30 ಗಂಟೆಗೆ ಪಿರ್ಯಾದಿದಾರರಾದ ಮಂಜುನಾಥ ಬಿನ್ ಬಚ್ಚಿರೆಡ್ಡಿ, ಮರಿನಾಯಕನಹಳ್ಳಿ ಗ್ರಾಮ, ಚಿಂತಾಮಣಿ ತಾಲ್ಲೂಕು ರವರು ಠಾಣೆಗೆ ಹಾಜರಾಗಿ ನೀಡಿದ ಲಿಖಿತ ದೂರಿನ ಸಾರಾಂಶವೇನೆಂದರೆ”: ತಾನು ಮೇಲ್ಕಂಡಂತೆ ವಾಸವಾಗಿರುತ್ತೇನೆ. ಚಿಂತಾಮಣಿ ತಾಲ್ಲೂಕು ಮುರಗಮಲ್ಲಾ ಹೋಬಳಿ ಮರಿನಾಯಕನಹಳ್ಳಿ ಗ್ರಾಮದ ಸರ್ವೆ ನಂ 151 ರಲ್ಲಿ 2.35 ಎಕರೆ ಜಮೀನು ತಮ್ಮ ತಂದೆಯಾದ ಬಚ್ಚಿರೆಡ್ಡಿ ರವರ ಹೆಸರಿನಲ್ಲಿ ಇರುತ್ತದೆ. ಸದರಿ ಜಮೀನಿನಲ್ಲಿ ತಾವು ಈಗ್ಗೆ 35 ವರ್ಷಗಳ ಹಿಂದೆ 180 ಮಾವಿನ ಮರಗಳನ್ನು ನೆಟ್ಟಿದ್ದು, ಸದರಿ ಮಾವಿನ ಗಿಡಗಳಿಗೆ ಫಸಲು ಬಿಡಲು ಅನೂಕೂಲವಾಗುವಂತೆ ಡ್ರಿಪ್ ಇರಿಗೇಷನ್ ವ್ಯವಸ್ಥೆ ಮಾಡಿ ನೀರು ಹರಿಸುತ್ತಿದ್ದರಿಂದ ಗಿಡಗಳು ಹೂ, ಹಣ್ಣು ಬಿಟ್ಟಿದ್ದವು. ತಮಗೂ ಮತ್ತು ಗಂಡ್ರಗಾನಹಳ್ಳಿ ಗ್ರಾಮದ ರಾಮಚಂದ್ರಾರೆಡ್ಡಿ ರವರ ನಡುವೆ ಹಳೇ ವೈಷಮ್ಯ ಇರುತ್ತದೆ. ಈ ದಿನ ದಿನಾಂಕ 28-03-2020 ರಂದು ಮದ್ಯಾಹ್ನ ಸದರಿ ಸರ್ವೆ ನಂ ಜಮೀನಿನ ಬಳಿ ಹೋಗಿ ನೋಡಲಾಗಿ ಜಮೀನಿನ ಪಶ್ಚಿಮದ ಕಡೆಗಿನ ಮಾವಿನ ತೋಪಿಗೆ ಬೆಂಕಿ ಬಿದ್ದು, ಸುಮಾರು 50 ಗಿಡಗಳು ಅದಕ್ಕೆ ಅಳವಡಿಸಿದ್ದ ಪಿ.ವಿ.ಸಿ ಪೈಪ್ ಮತ್ತು ಡ್ರಿಪ್ ಇರಿಗೇಷನ್ ಸುಟ್ಟು ಹೋಗಿ ತಮಗೆ ಸುಮಾರು 3 ಲಕ್ಷ ರೂಗಳಷ್ಠು ನಷ್ಠವಾಗಿರುತ್ತದೆ. ತಮ್ಮ ನಡುವೆ ಹಳೇ ವೈಷಮ್ಯ ಇರುವ ಕಾರಣ ಗಂಡ್ರಗಾನಹಳ್ಳಿ ಗ್ರಾಮದ ರಾಮಚಂದ್ರಾರೆಡ್ಡಿರವರು ದಿನಾಂಕ 27-03-2020 ರಂದು ಸಂಜೆ ಸುಮಾರು 7-30 ಗಂಟೆ ಸಮಯದಲ್ಲಿ ತಮ್ಮ ಜಮೀನಿನೊಳಗೆ ಅಕ್ರಮ ಪ್ರವೇಶ ಮಾಡಿ ತಮ್ಮ ಮಾವಿನ ಮರಗಳಿಗೆ ಬೆಂಕಿ ಇಟ್ಟಿರುಬಹುದೆಂದು ಅನುಮಾನ ಇರುತ್ತದೆ. ಆದ್ದರಿಂದ ಈ ಬಗ್ಗೆ ಪರಿಶೀಲನೆ ಮಾಡಿ ಕಾನೂನು ರೀತ್ಯಾ ಕ್ರಮ ಜರುಗಿಸಿ ತನಗೆ ನ್ಯಾಯ ಒದಗಿಸಲು ಕೋರಿ ಪಿರ್ಯಾದು.
4. ಶಿಡ್ಲಘಟ್ಟ ಗ್ರಾಮಾಂತರ ಪೊಲೀಸ್ ಠಾಣೆ ಮೊ.ಸಂ. 74/2020 ಕಲಂ.15(ಎ), 32(3) ಕೆ.ಇ ಆಕ್ಟ್:-
ದಿನಾಂಕ 28/03/2020 ರಂದು ಮದ್ಯಾಹ್ನ 3-00 ಗಂಟೆ ಸಮಯದಲ್ಲಿ ನಾನು ಠಾಣೆಯಲ್ಲಿ ಕರ್ತವ್ಯದಲ್ಲಿದ್ದಾಗ ಯಾರೋ ಬಾತ್ಮೀದಾರರಿಂದ ಮೇಲೂರು ಗ್ರಾಮದ ವಾಸಿ ಕೆ.ಎಸ್ ಗಿರೀಶ ಬಿನ್ ಕೆ.ವಿ ಶ್ರೀನಿವಾಸ ಎಂಬಾತನು ತನ್ನ ಮನೆಯ ಮುಂಭಾಗದ ಸಾರ್ವಜನಿಕ ಸ್ಥಳದಲ್ಲಿ ಅಕ್ರಮವಾಗಿ ಮದ್ಯದ ಟೆಟ್ರಾ ಪಾಕೇಟ್ ಗಳನ್ನಿಟ್ಟುಕೊಂಡು ಅಲ್ಲಿಯೇ ಸಾರ್ವಜನಿಕರಿಗೆ ಕುಡಿಯಲು ಅನುವು ಮಾಡಿಕೊಟ್ಟಿರುವುದಾಗಿ ಮಾಹಿತಿ ಬಂದಿದ್ದು, ತದ ನಂತರ ನಾನು ಠಾಣೆಯ ಸಿಬ್ಬಂಧಿಯಾದ ಹೆಚ್.ಸಿ-86 ಹರೀಶ್ ರವರೊಂದಿಗೆ ಠಾಣೆಗೆ ಒದಗಿಸಿರುವ ಜೀಪ್ ನಂಬರ್ ಕೆಎ-40-ಜಿ-357 ರಲ್ಲಿ ಮೇಲೂರು ಗ್ರಾಮಕ್ಕೆ ಹೋಗಿ ಪಂಚಾಯ್ತಿದಾರರನ್ನು ಬರಮಾಡಿಕೊಂಡು ಅವರಿಗೆ ವಿಷಯವನ್ನು ತಿಳಿಸಿ, ನಂತರ ಪಂಚರೊಂದಿಗೆ ಕೆ.ಎಸ್. ಗಿರೀಶ್ ರವರ ಮನೆಯ ಸಮೀಪ ಹೋಗಿ ಜೀಪ್ ಅನ್ನು ನಿಲ್ಲಿಸಿ ಮರೆಯಲ್ಲಿ ನಿಂತು ನೋಡಲಾಗಿ ಮನೆಯ ಮುಂಭಾಗದ ಕಲ್ಲು ಜಗುಲಿಯ ಮೇಲೆ ಯಾರೋ ಇಬ್ಬರು ಆಸಾಮಿಗಳು ಮದ್ಯವನ್ನು ಸೇವನೆ ಮಾಡುತ್ತಿರುವುದು ಕಂಡು ಬಂದಿದ್ದು, ಪಂಚರ ಸಮಕ್ಷಮ ದಾಳಿ ಮಾಡಲಾಗಿ ಮಧ್ಯವನ್ನು ಕುಡಿಯುತ್ತಿದ್ದ ಸಾರ್ವಜನಿಕರು ಸಮವಸ್ತ್ರದಲ್ಲಿದ್ದ ನಮ್ಮನ್ನು ಕಂಡು ಓಡಿ ಹೋಗಿದ್ದು, ನಂತರ ಮನೆಯ ಮುಂಭಾಗದಲ್ಲಿ ಮದ್ಯವನ್ನು ಹಿಡಿದು ಕುಳಿತುಕೊಂಡಿದ್ದ ಆಸಾಮಿಯನ್ನು ವಶಕ್ಕೆ ಪಡೆದು ಆತನ ಹೆಸರು ವಿಳಾದ ಕೇಳಲಾಗಿ ಕೆ.ಎಸ್. ಗಿರೀಶ್ ಬಿನ್ ಕೆ ವಿ ಶ್ರೀನಿವಾಸ, 28 ವರ್ಷ, ನಾಯಕ, ವ್ಯಾಪಾರ, ಮೇಲೂರು ಗ್ರಾಮ, ಶಿಡ್ಲಘಟ್ಟ ತಾಲ್ಲೂಕು ಎಂದು ತಿಳಿಸಿದ್ದು, ನಂತರ ಸದರಿ ಆಸಾಮಿಯನ್ನು ವಿಚಾರಣೆ ಮಾಡಲಾಗಿ ಆಸಾಮಿಯು ತನ್ನ ಬಳಿ ಇದ್ದ ಮದ್ಯದ ಟೆಟ್ರಾ ಪಾಕೇಟ್ ಗಳಿರುವ ಕಪ್ಪು ಬಣ್ಣದ ಕವರ್ ಅನ್ನು ತಂದು ಹಾಜರು ಪಡಿಸಿದ್ದು, ಅದನ್ನು ಪರಿಶೀಲಿಸಲಾಗಿ ಅದರಲ್ಲಿ ORIGINAL CHOICE DELUXE WHISKY ಯ 8 ಟೆಟ್ರಾ ಪಾಕೇಟ್ ಗಳಿದ್ದು ಪ್ರತಿಯೊಂದು ಟೆಟ್ರಾ ಪಾಕೇಟ್ ಮೇಲೆ 30.32 ಎಂದು ಬೆಲೆ ನಮೂದಾಗಿದ್ದು, ಇವುಗಳ ಒಟ್ಟು ಬೆಲೆ 242.56 ಆಗಿರುತ್ತದೆ. ಮನೆಯ ಮುಂಭಾಗದಲ್ಲಿಯೇ ORIGINAL CHOICE DELUXE WHISKY ಯ 3 ಖಾಲಿ ಟೆಟ್ರಾ ಪಾಕೇಟ್ ಗಳು, 2 ಖಾಲಿ ನೀರಿನ ವಾಟರ್ ಪಾಕೇಟ್ ಗಳು ಮತ್ತು 2 ಖಾಲಿ ಪ್ಲಾಸ್ಟಿಕ್ ಗ್ಲಾಸುಗಳು ಬಿದ್ದಿದ್ದು, ಮೇಲ್ಕಂಡ ಆಸಾಮಿ ಕೆ.ಎಸ್. ಗಿರೀಶ್ ಬಿನ್ ಕೆ ವಿ ಶ್ರೀನಿವಾಸ ಎಂಬಾತನು ಯಾವುದೇ ಪರವಾನಗಿ ಪಡೆಯದೆ ಅಕ್ರಮವಾಗಿ ಮದ್ಯವನ್ನು ಮಾರಾಟ ಮಾಡುತ್ತಾ ಹಾಗೂ ಕುಡಿಯಲು ಸಾರ್ವಜನಿಕರಿಗೆ ಸ್ಥಳಾವಕಾಶ ಮಾಡಿಕೊಟ್ಟಿರುವುದು ಕಂಡು ಬಂದಿದರಿಂದ ಸಂಜೆ 3.30 ಗಂಟೆಯಿಂದ 4.30 ಗಂಟೆಯವರೆಗೆ ಅಮಾನತ್ತು ಪಡಿಸಿಕೊಂಡು ಸಂಜೆ 5.00 ಗಂಟೆಗೆ ಆರೋಪಿ ಮತ್ತು ಮಾಲಿನೊಂದಿಗೆ ಠಾಣೆಗೆ ವಾಪಸ್ಸಾಗಿ ಆರೋಪಿಯ ವಿರುದ್ದ ಠಾಣಾ ಮೊ.ಸಂ. 74/2020 ಕಲಂ 15(ಎ),32(3) ಕೆಇ ಆಕ್ಟ್ ರೀತ್ಯಾ ಸ್ವತಃ ಕೇಸು ದಾಖಲಿಸಿರುತ್ತೇನೆ.
5. ಶಿಡ್ಲಘಟ್ಟ ಗ್ರಾಮಾಂತರ ಪೊಲೀಸ್ ಠಾಣೆ ಮೊ.ಸಂ. 75/2020 ಕಲಂ.15(ಎ), 32(3) ಕೆ.ಇ ಆಕ್ಟ್:-
ದಿನಾಂಕ:28.03.2020 ರಂದು ರಾತ್ರಿ 8.00 ಗಂಟೆಯಲ್ಲಿ ಪಿರ್ಯಾದಿದಾರರಾದ ಶ್ರೀಲಿಯಾಕತ್ ಉಲ್ಲಾ ಪಿ.ಎಸ್.ಐ ಶಿಡ್ಲಘಟ್ಟ ಗ್ರಾಮಾಂತರ ಪೊಲೀಸ್ ಠಾಣೆ ರವರು ಠಾಣೆಗೆ ಹಾಜರಾಗಿ ಹಾಜರುಪಡಿಸಿದ ಅರೋಪಿ ಮಾಲು, ಪಂಚನಾಮೆ, ವರದಿಯನ್ನು ಪಡೆದುಕೊಂಡು ಪರಿಶೀಲಿಸಿದರ ಸಾರಾಂಶವೆನೆಂದರೆ, ದಿನಾಂಕ 28/03/2020 ರಂದು ಸಂಜೆ 6.00 ಗಂಟೆ ಸಮಯದಲ್ಲಿ ನಾನು ಠಾಣೆಯಲ್ಲಿ ಕರ್ತವ್ಯದಲ್ಲಿದ್ದಾಗ ಯಾರೋ ಬಾತ್ಮೀದಾರರಿಂದ ಬೆಳ್ಳುಟ್ಟಿ ಗ್ರಾಮದ ವಾಸಿ ನಾಗೇಶ ಬಿನ್ ಆಂಜಿನಪ್ಪ ಎಂಬಾತನು ತನ್ನ ಮನೆಯ ಮುಂಭಾಗದ ಸಾರ್ವಜನಿಕ ಸ್ಥಳದಲ್ಲಿ ಅಕ್ರಮವಾಗಿ ಮದ್ಯದ ಟೆಟ್ರಾ ಪಾಕೇಟ್ ಗಳನ್ನಿಟ್ಟುಕೊಂಡು ಅಲ್ಲಿಯೇ ಸಾರ್ವಜನಿಕರಿಗೆ ಕುಡಿಯಲು ಅನುವು ಮಾಡಿಕೊಟ್ಟಿರುವುದಾಗಿ ಮಾಹಿತಿ ಬಂದಿದ್ದು, ತದ ನಂತರ ನಾನು ಠಾಣೆಯ ಸಿಬ್ಬಂಧಿಯಾದ ಹೆಚ್.ಸಿ-86 ಹರೀಶ್ ರವರೊಂದಿಗೆ ಠಾಣೆಗೆ ಒದಗಿಸಿರುವ ಜೀಪ್ ನಂಬರ್ ಕೆಎ-40-ಜಿ-357 ರಲ್ಲಿ ಬೆಳ್ಳುಟ್ಟಿ ಗ್ರಾಮಕ್ಕೆ ಹೋಗಿ ಪಂಚಾಯ್ತಿದಾರರನ್ನು ಬರಮಾಡಿಕೊಂಡು ಅವರಿಗೆ ವಿಷಯವನ್ನು ತಿಳಿಸಿ, ನಂತರ ಪಂಚರೊಂದಿಗೆ ನಾಗೇಶ ರವರ ಮನೆಯ ಸಮೀಪ ಹೋಗಿ ಜೀಪ್ ಅನ್ನು ನಿಲ್ಲಿಸಿ ಮರೆಯಲ್ಲಿ ನಿಂತು ನೋಡಲಾಗಿ ಮನೆಯ ಮುಂಭಾಗದ ಕಲ್ಲು ಜಗುಲಿಯ ಮೇಲೆ ಯಾರೋ ಇಬ್ಬರು ಆಸಾಮಿಗಳು ಮದ್ಯವನ್ನು ಸೇವನೆ ಮಾಡುತ್ತಿರುವುದು ಕಂಡು ಬಂದಿದ್ದು, ಪಂಚರ ಸಮಕ್ಷಮ ದಾಳಿ ಮಾಡಲಾಗಿ ಮಧ್ಯವನ್ನು ಕುಡಿಯುತ್ತಿದ್ದ ಸಾರ್ವಜನಿಕರು ಸಮವಸ್ತ್ರದಲ್ಲಿದ್ದ ನಮ್ಮನ್ನು ಕಂಡು ಓಡಿ ಹೋಗಿದ್ದು, ನಂತರ ಮನೆಯ ಮುಂಭಾಗದಲ್ಲಿ ಮದ್ಯವನ್ನು ಹಿಡಿದು ಕುಳಿತುಕೊಂಡಿದ್ದ ಆಸಾಮಿಯನ್ನು ವಶಕ್ಕೆ ಪಡೆದು ಆತನ ಹೆಸರು ವಿಳಾದ ಕೇಳಲಾಗಿ ನಾಗೇಶ ಬಿನ್ ಆಂಜಿನಪ್ಪ, 40 ವರ್ಷ, ಕೂಲಿ ಕೆಲಸ, ಬೆಳ್ಳುಟ್ಟಿ ಗ್ರಾಮ, ಶಿಡ್ಲಘಟ್ಟ ತಾಲ್ಲೂಕು ಎಂದು ತಿಳಿಸಿದ್ದು, ನಂತರ ಸದರಿ ಆಸಾಮಿಯನ್ನು ವಿಚಾರಣೆ ಮಾಡಲಾಗಿ ಆಸಾಮಿಯು ತನ್ನ ಬಳಿ ಇದ್ದ ಮದ್ಯದ ಟೆಟ್ರಾ ಪಾಕೇಟ್ ಗಳಿರುವ ಕಪ್ಪು ಬಣ್ಣದ ಕವರ್ ಅನ್ನು ತಂದು ಹಾಜರು ಪಡಿಸಿದ್ದು, ಅದನ್ನು ಪರಿಶೀಲಿಸಲಾಗಿ ಅದರಲ್ಲಿ ORIGINAL CHOICE DELUXE WHISKY ಯ 6 ಟೆಟ್ರಾ ಪಾಕೇಟ್ ಗಳಿದ್ದು ಪ್ರತಿಯೊಂದು ಟೆಟ್ರಾ ಪಾಕೇಟ್ ಮೇಲೆ 30.32 ಎಂದು ಬೆಲೆ ನಮೂದಾಗಿದ್ದು, ಇವುಗಳ ಒಟ್ಟು ಬೆಲೆ 181.92 ಆಗಿರುತ್ತದೆ. ಮನೆಯ ಮುಂಭಾಗದಲ್ಲಿಯೇ ORIGINAL CHOICE DELUXE WHISKY ಯ 3 ಖಾಲಿ ಟೆಟ್ರಾ ಪಾಕೇಟ್ ಗಳು, 3 ಖಾಲಿ ನೀರಿನ ವಾಟರ್ ಪಾಕೇಟ್ ಗಳು ಮತ್ತು 4 ಖಾಲಿ ಪ್ಲಾಸ್ಟಿಕ್ ಗ್ಲಾಸುಗಳು ಬಿದ್ದಿದ್ದು, ಮೇಲ್ಕಂಡ ಆಸಾಮಿ ಕೆ.ಎಸ್. ಗಿರೀಶ್ ಬಿನ್ ಕೆ ವಿ ಶ್ರೀನಿವಾಸ ಎಂಬಾತನು ಯಾವುದೇ ಪರವಾನಗಿ ಪಡೆಯದೆ ಅಕ್ರಮವಾಗಿ ಮದ್ಯವನ್ನು ಮಾರಾಟ ಮಾಡುತ್ತಾ ಹಾಗೂ ಕುಡಿಯಲು ಸಾರ್ವಜನಿಕರಿಗೆ ಸ್ಥಳಾವಕಾಶ ಮಾಡಿಕೊಟ್ಟಿರುವುದು ಕಂಡು ಬಂದಿದರಿಂದ ಸಂಜೆ 6.30 ಗಂಟೆಯಿಂದ 7.30 ಗಂಟೆಯವರೆಗೆ ಅಮಾನತ್ತು ಪಡಿಸಿಕೊಂಡು ಆರೋಪಿ, ಪಂಚನಾಮೆ ಮತ್ತು ಮಾಲನ್ನು ಠಾಣೆಯಲ್ಲಿ ಹಾಜರು ಪಡಿಸಿ ತಮ್ಮ ವಶಕ್ಕೆ ನೀಡುತಿದ್ದು, ಆರೋಪಿಯ ವಿರುದ್ದ ಮುಂದಿನ ಕಾನೂನು ಕ್ರಮ ಜರುಗಿಸಿ ವರದಿಯನ್ನು ನೀಡಲು ಸೂಚಿಸಿ ನೀಡಿದ ವರದಿಯನ್ನು ಪಡೆದು ಪ್ರಕರಣ ದಾಖಲಿಸಿರುತ್ತೆ.
6. ಶಿಡ್ಲಘಟ್ಟ ಗ್ರಾಮಾಂತರ ಪೊಲೀಸ್ ಠಾಣೆ ಮೊ.ಸಂ. 76/2020 ಕಲಂ.87 ಕೆ.ಪಿ ಆಕ್ಟ್:-
ದಿನಾಂಕ 28/03/2020 ರಂದು ರಾತ್ರಿ 8.00 ಗಂಟೆ ಸಮಯದಲ್ಲಿ ನಾನು ಕರ್ತವ್ಯದಲ್ಲಿದ್ದಾಗ ಯಾರೋ ಬಾತ್ಮೀದಾರರಿಂದ ಶಿಡ್ಲಘಟ್ಟ ಗ್ರಾಮಾಂತರ ಪೊಲೀಸ್ ಠಾಣಾ ಸರಹದ್ದಿನ ಮಳ್ಳೂರು ಗ್ರಾಮದ ಕಾಲೋನಿಯ ರಸ್ತೆಯ ಪಕ್ಕದಲ್ಲಿನ ಬೀದಿ ದೀಪದ ಕೆಳಗಡೆ ಯಾರೋ ಆಸಾಮಿಗಳು ಗುಂಪು ಕಟ್ಟಿಕೊಂಡು ಅಕ್ರಮವಾಗಿ ಹಣವನ್ನು ಪಣವಾಗಿ ಕಟ್ಟಿ ಅಂದರ್ ಬಾಹರ್ ಇಸ್ಪೀಟ್ ಜೂಜಾಟವಾಡುತ್ತಿರುವುದಾಗಿ ಬಾತ್ಮೀ ಬಂದಿದ್ದು, ಸದರಿ ಆಸಾಮಿಗಳ ವಿರುದ್ದ ಪ್ರ ವ ವರದಿಯನ್ನು ದಾಖಲಿಸಿಕೊಂಡು, ಸದರಿ ಸ್ಥಳದ ಮೇಲೆ ದಾಳಿ ಕೈಗೊಳ್ಳಲು ಅನುಮತಿ ನೀಡ ಬೇಕಾಗಿ ಘನ ನ್ಯಾಯಾಲಯದಲ್ಲಿ ಪ್ರಾರ್ಥಿಸಿ ಘನ ನ್ಯಾಯಾಲಯಕ್ಕೆ ಪಿಸಿ-27 ರವರ ಮೂಲಕ ಮನವಿಯನ್ನು ಸಲ್ಲಿಸಿಕೊಂಡಿದ್ದು, ಪಿಸಿ-27 ರವರು ಘನ ನ್ಯಾಯಾಲಯದಿಂದ ಅನುಮತಿಯನ್ನು ಪಡೆದು ರಾತ್ರಿ 8.15 ಗಂಟೆಗೆ ಠಾಣೆಗೆ ತಂದು ಹಾಜರು ಪಡಿಸಿದ ಮನವಿಯನ್ನು ಪಡೆದು ಪ್ರ ವ ವರದಿಯನ್ನು ದಾಖಲಿಸಿಕೊಂಡಿರುತ್ತೆ.